ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
(ಸವದತ್ತಿ) ಬೆಳಗಾವಿ ಸೆ.7 ರಂದು ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಪ್ರತಿಷ್ಠಾಪಿಸುವ ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ನಂತರ ಪ್ರತಿವರ್ಷದಂತೆ ಕಾರ್ಯಾಲಯದಲ್ಲಿ
ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆಯನ್ನು ಸಲ್ಲಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿಯ ಸಿಬ್ಬಂದಿ
ಇದ್ದರು.
