: ವರ್ಷ ಕಳೆದರು ನಗರೋತ್ತಾನ ಕಾಮಗಾರಿ ಆರಂಭಿಸಿಲ್ಲ ಏಕೆ ? ಗುತ್ತಿಗೆದಾರನಿಗೆ ನೋಟಿಸ್ ನೀಡಿ : ಶಾಸಕ ವಿಶ್ವಾಸ್
ಸವದತ್ತಿ : ಮುಖ್ಯಮಂತ್ರಿಗಳ ಅಮೃತ್ ನಗರೋತ್ತಾನ ಯೋಜನೆಯಡಿ ಬಸವ ಸದನ ಬಡಾವಣೆಯಲ್ಲಿ ರಸ್ತೆ, ಚರಂಡಿ ಹಾಗೂ ಪಟ್ಟಣದಲ್ಲಿ 3ಕಡೆ ಬಸ್ ಸೆಲ್ಟರ್ ನಿಲ್ದಾನದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ವರ್ಷ ಕಳೆದರು ಕಾಮಗಾರಿ ಆರಂಭಿಸದ ಗುತ್ತಿಗೆದಾರನಿಗೆ ಕಪ್ಪು ಪಟ್ಟಿಗೆ ಸೇರಿಸಿ ಎಂದು ಸದಸ್ಯರು ಒತ್ತಾಯಿಸಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರು ಹಾಗೂ ಸ್ವಚ್ಛತೆ ವಿಷಯದ ಕುರಿತು ಚರ್ಚೆ ನಡೆದಾಗ ಸದಸ್ಯ ಶಿವಾನಂದ ಹೂಗಾರ ಮಾತನಾಡಿ, ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಮುಖ್ಯ ರಸ್ತೆ ಹೊರತುಪಡಿಸಿ ಕೆಲವೆಡೆ ಮಧ್ಯಾಹ್ನದ ಸಮಯ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳನ್ನು ಬೇರೆಡೆ ವರ್ಗಾಯಿಸಿ ಎಂದು ಆಗ್ರಹಿಸಿದ ಅವರು, ಶಾಸಕರು, ಸದಸ್ಯರು ಕೂಡಿ ಬಡಾವಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲು ಮುಂದಾಗಬೇಕು ಎಂದರು.
ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಮುಖ್ಯಮಂತ್ರಿಗಳ ಅಮೃತ್ ನಗರೋತ್ತಾನ ಯೋಜನೆಯಡಿ ಪಟ್ಟಣದಲ್ಲಿ ರಸ್ತೆ, ಚರಂಡಿ ಹಾಗೂ 3 ಕಡೆ ಬಸ್ ಸೆಲಟರ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿ ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಆರಂಭವಾಗಿಲ್ಲ ಏಕೆ ? ಗುತ್ತಿಗೆದಾರನಿಗೆ ನೋಟಿಸ್ ನೀಡಿ. ಮುಖ್ಯ ರಸ್ತೆ ಹೊರತುಪಡಿಸಿ ಕೆಲವೆಡೆ ಮಧ್ಯಾಹ್ನದ ಸಮಯ ರಸ್ತೆ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ ಎಂಬ ದೂರಿವೆ ಇದೇ ರೀತಿ ಮುಂದುವರೆದರೆ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಶಾಂತಿನಗರದಲ್ಲಿ ಸ್ಮಶಾನಕ್ಕೆ ಹೋಗಲು ರಸ್ತೆ ನಿರ್ಮಿಸುವಂತೆ ಹಾಗೂ ಉತಾರ ನೀಡಲು ವಿನಾಕಾರಣ ಸಾರ್ವಜನಿಕರನ್ನು ಪುರಸಭೆಗೆ ಅಲೆದಾಡಿಸುತ್ತಾರೆ ಎಂದು ಸದಸ್ಯ ಮೌಲಾಸಾಬ ತಬ್ಬಲಜಿ ದೂರಿದರು.
ಅದಕ್ಕೆ ಪ್ರತಿಕ್ರಿಯಿಸಿದ ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಸಾರ್ವಜನಿಕರ ಸಮಸ್ಯೆಗೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಪಂದಿಸದಿರುವ ಸಾಕಷ್ಟು ದೂರುಗಳಿವೆ. ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ದ ಕ್ರಮವಿರಿಸಿ.
ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಕನಿಷ್ಠ 5 ದಿನಕ್ಕೊಮ್ಮೆ ನೀರು ಪೂರೈಸಲು ಕ್ರಮವಿರಿಸಿ. ವಾಟರ್ ಮ್ಯಾನ್ ಗಳು ನೀರು ಪೋಲಾಗದಂತೆ ಎಚ್ಚರವಹಿಸಿ. ಈ ಸ್ವತ್ತು ದಾಖಲಾತಿ ಪೂರೈಸುವಲ್ಲಿ ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ.
ವಾರಕ್ಕೊಮ್ಮೆ ಸದಸ್ಯರ ಹಾಗೂ ಅಧಿಕಾರಿಗಳ ಜೊತೆ ಬಡಾವಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲಾಗುವದು.ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲನೆಯಲ್ಲಿವೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.
ಪುರಸಭೆ ಮುಖ್ಯಧಿಕಾರಿ ಸಂಗನಬಸಯ್ಯ ಗದಗಿಮಠ ಮಾತನಾಡಿ, ಸದಸ್ಯರು ಅಧಿಕಾರಿಗಳ ಜೊತೆ ಸಮಸ್ಯೆಗಳ ಮತ್ತು ಪರಿಹಾರದ ಕುರಿತು ಚರ್ಚಿಸುವ ಮೂಲಕ ಅಭಿವೃದ್ಧಿಗೆ ಸಹಕರಿಸಿ ಎಂದರು.
ಎಸ್ ಎಲ್ ಎ ಒ ಕ್ರಾಸ್ ನಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್ ಮಾರ್ಗವಾಗಿ ಕಟಗೋಳ ಬ್ಯಾಂಕ್ ವರೆಗೆ ಅತಿಕ್ರಮ ತೆರವುಗೊಳಿಸಿ ರಸ್ತೆ ಅಗಲೀಕರಣಕ್ಕಾಗಿ ಸರ್ವೆ ಮಾಡಿಸಲು ಸರ್ವಾನುಮತದ ಒಪ್ಪಿಗೆ ಸೂಚಿಸಲಾಯಿತು.
ಸಭೆಯಲ್ಲಿ ವಿದ್ಯುತ್ ಕಂಬಗಳ ದುರಸ್ತಿ, ನೂತನ ತರಕಾರಿ ಮಾರುಕಟ್ಟೆಯ ಅಭಿವೃದ್ಧಿ ಮತ್ತು ಸ್ವಚ್ಛತಾ ವಿಷಯದ ಮೇಲೆ ಸದಸ್ಯರು ಚರ್ಚಿಸಿದರು.
ಈ ವೇಳೆ ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚನ್ನವರ, ಉಪಾಧ್ಯಕ್ಷೆ ದಾವಲಬಿ ಸನದಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಆಶಾ ಮನವಳ್ಳಿ, ಸದಸ್ಯರಾದ ರಾಜಶೇಖರ ಕಾರದಗಿ, ಬಾಪೂ ಚೂರಿಖಾನ, ಮಲ್ಲಿಕಾರ್ಜುನ ಪುರದಗುಡಿ, ಇದ್ದರು.
