*ಸವದತ್ತಿಯಲ್ಲಿ ಭಾರಿ ಮಳೆಗೆ ತತ್ತರಿಸಿದ ಜನಜೀವನ: ಮನೆಗಳಿಗೆ ನುಗ್ಗಿದ ನೀರು*
ಸವದತ್ತಿ : ನಗರದಲ್ಲಿ ಭಾರಿ ಮಳೆಗೆ ನಗರದ ವಿವಿಧ ಬಡಾವಣೆಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗಿರಿಜಣ್ಣವರ ಓಣಿ, ಬಜಾರ್ ರೋಡ್, ರಾಮಾಪೂರಸೈಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಚರಂಡಿಯ ಕೊಳಚೆ ನೀರು ಹಾಗೂ ಮಳೆ ನೀರು ನುಗ್ಗಿದ್ದರಿಂದ ಜನಜೀವನ ದುಸ್ತರವಾಗಿದೆ. ಮನೆಯಲ್ಲಿರುವ ಅಗತ್ಯ ವಸ್ತುಗಳು, ಧಾನ್ಯಗಳು ಮತ್ತು ಗೃಹೋಪಯೋಗಿ ವಸ್ತುಗಳು ಹಾನಿಗೊಳಗಾಗಿವೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು ಮತ್ತು ಕಸಕಡ್ಡಿಗಳಿಂದ ಚರಂಡಿಗಳು ತುಂಬಿ ತುಳುಕುತ್ತಿರುವುದರಿಂದ ನೀರು ರಸ್ತೆ ಮೇಲೆ ಹರಿಯುತ್ತಿದೆ. ರಸ್ತೆಗಳಲ್ಲಿ ಮೊಣಕಾಲು ಮಟ್ಟದಷ್ಟು ನೀರು ನಿಂತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಗಿದೆ. ನಗರಸಭೆ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಈ ಕೂಡಲೇ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ನೀರು ಸರಾಗವಾಗಿ ಹರಿದು ಹೋಗಲು ತುರ್ತು ಕ್ರಮ ಕೈಗೊಳ್ಳಬೇಕು.
ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅವಘಡಗಳು ಸಂಭವಿಸುವ ಭೀತಿ ವ್ಯಕ್ತವಾಗಿದೆ.ಎಂದರು.