ಪರಿಶಿಷ್ಟ ಜಾತಿ ,ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ :
ಸವದತ್ತಿ : ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ,ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ಎಸ್ಎಸ್ ಪಿ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.
ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ತಾಲೂಕಿನ ಪರಿಶಿಷ್ಟ ಜಾತಿ ,ಪರಿಶಿಷ್ಟ ವರ್ಗದ
ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡಿಸಿ
ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://ssp.postmatric.karnataka.gov.in ಮೂಲಕ ಸೆಪ್ಟಂಬರ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಇಲಾಖೆ ದೂ.ಸಂ. 08330 222208 ಮತ್ತು 9480843072 ಗಳನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-2 ಸಹಾಯಕ ನಿರ್ದೇಶಕ ಆರ್ ಆರ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
