*ಅಕ್ರಮ ಗಾಂಜಾ ಸಾಗಾಟ ಆರೋಪಿ ಬಂಧನ*
ಸವದತ್ತಿ : ನಗರದ ಧಾರವಾಡ ರಸ್ತೆಯಲ್ಲಿ ಅಬಕಾರಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ತಾಲೂಕಿನ ಹಿರೂರ ಗ್ರಾಮದ ನಿವಾಸಿ ಸುಭಾಸ ಪಕೀರಪ್ಪ ಕುರಿ ಬಂಧಿತ ಆರೋಪಿಯಾಗಿದ್ದಾನೆ.
ಗುರುವಾರ ರಾತ್ರಿ ಸುಮಾರು 8:45ರ ವೇಳೆಗೆ ಸವದತ್ತಿಯಿಂದ ಧಾರವಾಡಕ್ಕೆ ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಬಕಾರಿ ಇಲಾಖೆಗೆ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಅಬಕಾರಿ ನಿರೀಕ್ಷಕರಾದ ದಾವಲಸಾಬ ಶಿಂದೋಗಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಿವಪ್ರಸಾದ್ ಪಾಟೀಲ್, ರಾಮಚಂದ್ರ ಮತ್ತು ರವಿ ಕಲ್ಮನ್ನವರ್ ಅವರನ್ನೊಳಗೊಂಡ ತಂಡವು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳದ ಮೇಲೆ ದಾಳಿ ನಡೆಸಿದೆ.
ದಾಳಿಯ ಸಂದರ್ಭದಲ್ಲಿ ಗಾಂಜಾ ಸಮೇತ ಸಿಕ್ಕಿಬಿದ್ದ ಆರೋಪಿ ಸುಭಾಷ್ ಕುರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ಎನ್ಡಿಪಿಎಸ್ ಕಾಯ್ದೆ 1985ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದುರು.
