ಸವದತ್ತಿ : ನಗರದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಉಪವಿಭಾಗದ ಅಧಿಕಾರಿ ಎಇಇ ಬಸವರಾಜ ಅಯ್ಯನಗೌಡರ ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರದ ಸಮತೋಲನ ಕಾಪಾಡುವಲ್ಲಿ ಗಿಡ-ಮರಗಳ ಪಾತ್ರ ಬಹಳ ದೊಡ್ಡದು. ಕೇವಲ ನೆಡುವುದು ಮಾತ್ರವಲ್ಲದೆ, ಅವುಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪರಿಸರ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಪ್ರತಿಯೊಬ್ಬರೂ ಪರಿಸರ ಪ್ರೇಮಿಗಳಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು, ಭೂಮಿಯನ್ನು ಹಸಿರಾಗಿಸೋಣ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಎಮ್.ಐ.ಇಂಗಳಗಿಮಠ, ಮಂಜುನಾಥ ಅಗಸಿಮನಿ, ಪ್ರಮೋದ್ ಗಾಂಜಿ,ಆಯ್. ಎಮ್.ದಳವಾಯಿ, ಮಂಜುನಾಥ ಇಟ್ನಾಳ,ಸಚಿನ್ ರಂಜಿಣಗಿ, ಉಪವಿಭಾಗದ ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.